Sunday, May 19, 2024
Homeಸುದ್ದಿರಾಜ್ಯಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ

ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಲಾಂಗ್ ಝಳಪಿಸಿದ ವಿದ್ಯಾರ್ಥಿ

ಮಂಡ್ಯ : ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ಪುಂಡ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಪ್ರಕರಣ ನಾಗಮಂಗಲದಲ್ಲಿ ನಡೆದಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಲಾಂಗ್ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿದ್ಯಾರ್ಥಿಯಿಂದ ಬೈಕ್ ಹಾಗೂ ಲಾಂಗ್‍ನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಮತ್ತೊಮ್ಮೆ ಈ ರೀತಿ ಮಾಡದಂತೆ ತಿಳುವಳಿಕೆ ಹೇಳಿ ಕಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News