ಶಿರ್ವ, ಆ.25: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಮಾನಸ ವಿಶೇಷ ಶಾಲೆ ಪಾಂಬೂರು ಇಲ್ಲಿನ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ನ್ಯಾಯವಾದಿ ಮೆಲ್ವಿನ್ ಡಿಸೋಜ, ಸಮಾಜ ಸೇವಕರಾದ ಹಸನ್ ಇಬ್ರಾಹಿಂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಮಾನಸ ಸಂಸ್ಥೆಯ ಅಧ್ಯಕ್ಷರಾದ ಹೆನ್ರಿ ಮೆನೆಜಸ್ ಸ್ವಾಗತಿಸಿದರು. ಶಾಖಾ ಪ್ರಬಂಧಕಿ ಶ್ರೀಮತಿ ಪ್ರಮೀಳಾ ಲೋಬೋ ಪ್ರಸ್ತಾವಿಕ ನುಡಿಗಳನ್ನಾಡಿದರು.
ಪ್ರಶಾಂತ್ ಜತ್ತನ್ನ ಸಂಸ್ಥೆಯ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿ ಮುಗ್ದ ಮಕ್ಕಳಿಗೆ ಉಡುಗೊರೆ ನೀಡುವ ಮೂಲಕ ದೇವರ ಮೆಚ್ಚುಗೆಗೆ ಪಾತ್ರವೆಂದು ಶುಭ ಹಾರೈಸಿದರು.
ಇನ್ನೋರ್ವ ಮುಖ್ಯ ಅತಿಥಿ ಮೆಲ್ವಿನ್ ಡಿಸೋಜ ಮಾತನಾಡಿ ಶಿರ್ವ ಶಾಖೆಯ ಜನಸ್ನೇಹಿ ಸೇವೆಯನ್ನು ಸ್ಮರಿಸುತ್ತಾ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳು ಸಂಸ್ಥೆಯಿಂದ ನಡೆಯಲಿ ಎಂದು ಆಶಿಸಿದರು.
ಶಾಖೆಯ ಸಹಾಯಕ ವ್ಯವಸ್ಥಾಪಕರಾದ ವಿಲ್ಸನ್ ಪ್ರಿತೇಶ್ ರವರು ಧನ್ಯವಾದ ಸಮರ್ಪಿಸಿ, ಮಾನಸ ಸಂಸ್ಥೆಯ ಶಿಕ್ಷಕಿ ಶಶಿಕಲ ಕಾರ್ಯಕ್ರಮ ನಿರೂಪಿಸಿದರು.
ಈ ವೇಳೆ ಶಾಲಾ ಪ್ರಾಂಶುಪಾಲೆ ಸಿ| ಅನ್ಸಿಲ್ಲಾ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಶಿರ್ವ ಶಾಖೆಯ ತೃಪ್ತಿ, ಹರ್ಷಿತಾ, ಬ್ಲೆಸ್ಸಿ, ಮನೀಶ್ ರವರು ಸಹಕರಿಸಿದರು.