ಉಡುಪಿ, ಆ.25: ಇತ್ತೀಚೆಗೆ ನವೀಕರಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ದೇವಳದ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಸಂಪನ್ನಗೊಂಡಿತು.
ವೇದಮೂರ್ತಿ ಶ್ರೀ ಕೆ ವಿ ರಾಘವೇಂದ್ರ ಉಪಾಧ್ಯಾಯ, ಕೆ ವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ, ವೇದ ಮೂರ್ತಿ ಶ್ರೀಶ ಭಟ್‌ರವರು ಪೂಜಾ ವಿಧಿ ವಿಧಾನ ನೆರವೇರಿಸಿದರು.

ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾರಾಣಿ ಬೋಳೂರು, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.