ಉಡುಪಿ, ಆ.26: ಬಿಎಸ್ ಯಡಿಯೂರಪ್ಪ ನಿವೃತ್ತಿ ಬಳಿಕ ರಾಜ್ಯ ಬಿಜೆಪಿ ನಾಯಕತ್ವದ ಕೊರತೆ ಅನುಭವಿಸುತ್ತಿದ್ಯಾ ಎಂಬ ಪ್ರಶ್ನೆ ಚರ್ಚೆಯಲ್ಲಿದೆ. ಈ ಹೊತ್ತಲ್ಲೇ ಕಾಂಗ್ರೆಸ್‍ಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದರು ಎಂದು ಸುದ್ದಿಯಾಗಿದೆ.
ಈ ಸುದ್ದಿಗೆ ಸ್ಪಷ್ಟನೆ ನೀಡಿದ ಶೆಟ್ಟರ್, ನನಗೆ ಈವರೆಗೆ ಯಾರೂ ಕರೆ ಮಾಡಿಲ್ಲ. ಅಮಿತ್ ಶಾ, ಮತ್ತೊಬ್ಬರು.. ಬಿಜೆಪಿ ಹೈಕಮಾಂಡ್ ಕಡೆಯಿಂದ ಯಾವುದೇ ಕರೆ ಬಂದಿಲ್ಲ ಎಂದು ಉತ್ತರಿಸಿದ್ದಾರೆ.
ಕರೆ ಬಾರದೇ ಈ ಎಲ್ಲಾ ಚರ್ಚೆಗಳು ಯಾಕೆ? ಕರೆ ಮಾಡಿದರೆ ನಾನು ಮಾಧ್ಯಮಗಳಿಗೆ ತಿಳಿಸುತ್ತೇನೆ. ಬಿಜೆಪಿಯಲ್ಲಿ ಮಿಸ್ ಹ್ಯಾಂಡಲಿಂಗ್ ಮತ್ತು ಮಿಸ್ ಮ್ಯಾನೇಜ್ಮೆಂಟ್ ಇದೆ. ನಮ್ಮಂತ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ. ಕರ್ನಾಟಕ ಬಿಜೆಪಿ ಲೀಡರ್ ಲೆಸ್ ಆಗಿದೆ. ಬಿಜೆಪಿ ಒಳಗೆ ಸಾಕಷ್ಟು ಜನ ನೊಂದಿದ್ದು ಸಂಕಟ ಪಡುತ್ತಿದ್ದಾರೆ. ಪಕ್ಷದಿಂದ ಹೊರಗೆ ಬರಲು ಬಹಳಷ್ಟು ಜನ ತಯಾರಾಗಿದ್ದಾರೆ ಎಂದು ಶೆಟ್ಟರ್ ತಿಳಿಸಿದರು.