ಕೊರಂಗ್ರಪಾಡಿ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಪ್ರಬಂಧಕ ಮಂಜೇಶ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ

ಉಡುಪಿ, ಆ.27: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಅಲೆವೂರಿನಲ್ಲಿ ನಡೆದಿದೆ.

ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಇತ್ತೀಚಿಗೆ ಪ್ರಮೋಷನ್ ಪಡೆದು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖಾ ಮ್ಯಾನೇಜರ್ ಆಗಿ ನೇಮಕಗೊಂಡಿದ್ದರು ಎನ್ನಲಾಗಿದೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡಿಸಿದ್ದಾರೆ.

ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ಇವರು, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಅಪಾರ ಅಭಿಮಾನಿಗಳನ್ನು ಗಳಿಸಿ ಜನಮನ್ನಣೆಗೆ ಪಾತ್ರರಾಗಿದ್ದರು.

ಮೃತರು ಪತ್ನಿ, ತಂದೆ ತಾಯಿ ಹಾಗೂ ಓರ್ವ ಪುತ್ರಿ, ಸಹೋದರರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

You cannot copy content from Baravanige News

Scroll to Top