Tuesday, June 18, 2024
Homeಸುದ್ದಿಕರಾವಳಿಮಂಗಳೂರಿನಲ್ಲಿ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರಿನಲ್ಲಿ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಡ್ರಗ್ಸ್ ಪೆಡ್ಲರ್ ಗಳನ್ನು ಇಂದು ಬಂಧಿಸಿದ್ದಾರೆ.ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು ಹಾಗೂ ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಎಂಬ ಇಬ್ಬರು ಕುಖ್ಯಾತ ಪೆಡ್ಲರ್ ಗಳನ್ನ ಸುರತ್ಕಲ್ ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿರುವಾಗಲೇ ಬಂಧಿಸಲಾಗಿದೆ.

ಆರೋಪಿಗಳಿಂದ ಎರಡು ಲಕ್ಷದ ಆರು ಸಾವಿರ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಇಬ್ಬರೂ ಆರೋಪಿಗಳು ಕೊಲೆಯತ್ನ, ಹಲ್ಲೆ, ಸರಗಳ್ಳತನ, ಮನೆಗಳ್ಳತನ ಹಾಗೂ ವಾಹನ ಕಳ್ಳತನ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇದೀಗ ಈ ಇಬ್ಬರೂ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದಾರೆ.

ಸಿಸಿಬಿ ಪೊಲೀಸರು ಸುರತ್ಕಲ್ ಪೊಲೀಸರಿಗೆ ಹಸ್ತಾಂತರಿಸಿದ್ದು, ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News