ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಕೆ. ಅರುಣ್ ಇಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಎಂ. ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಎಸ್ಪಿ ಡಾ.ಕೆ. ಅರಣ್, ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಅವಕಾಶವಿಲ್ಲ.
ಎಲ್ಲವೂ ಕಾನೂನಾತ್ಮಕ ನಡೆಯಬೇಕು. ಕಾನೂನು ವಿರೋಧಿ ಚಟುವಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅನೈತಿಕ ಪೊಲೀಸ್‌ಗಿರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಣಿಪಾಲದಲ್ಲಿ ನಡೆಯುತ್ತಿರುವ ಪಬ್, ಡ್ರಗ್ಸ್ ಸಹಿತ ಎಲ್ಲಾ ಕಾನೂನು ಬಾಹಿರ ಚಟುವಟಿಕೆಯ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ಹಿಂದಿನ ಎಸ್ಪಿ ಮಾಡಿರುವ ಎಲ್ಲಾ ಒಳ್ಳೆಯ ಕೆಲಸ ಕಾರ್ಯಗಳನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.