Thursday, April 18, 2024
Homeಸುದ್ದಿಕುಂದಾಪುರ : ರುಬ್ಬುವ ಕಲ್ಲಿಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕುಂದಾಪುರ : ರುಬ್ಬುವ ಕಲ್ಲಿಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕುಂದಾಪುರ : ಕುಡಿದ ಅಮಲಿನಲ್ಲಿ ತೂರಾಡಿಕೊಂಡು ಹೋಗಿ ರುಬ್ಬುವ ಕಲ್ಲಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾಲಾಡಿಯ ಕಾಸಾಡಿ ಎಂಬಲ್ಲಿ ನಡೆದಿದೆ.
ಕಾಸಾಡಿ ಕಾರಿಮನೆ ನಿವಾಸಿ 47 ವರ್ಷ ಪ್ರಾಯದ ಪಾರ್ವತಿ ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿಯುವ ಸ್ವಭಾವವನ್ನು ಹೊಂದಿದ್ದರು. ಸೆ 18ರಂದು ಕೆಲಸ ಮುಗಿಸಿ ಮನೆಗೆ ಮದ್ಯಪಾನ ಮಾಡಿಕೊಂಡು ಬಂದಿದ್ದು ಮನೆಗೆ ಪಾರ್ಸೆಲ್ ತೆಗೆದುಕೊಂಡು ಬಂದು ಬಳಿಕ ರಾತ್ರಿ ಕುಡಿದಿದ್ದರು. ಕುಡಿದ ಅಮಲಿನಲ್ಲಿ ತೂರಾಡಿಕೊಂಡು ಹೋಗಿ ರುಬ್ಬುವ ಕಲ್ಲಿನ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News