ಉಡುಪಿ, ಸೆ.09: ತುಳುಕೂಟ ಉಡುಪಿ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.
ಉಡುಪಿ ನಗರದ ಜಗನ್ನಾಥ ಸಭಾಭವನದಲ್ಲಿ ಇತ್ತೀಚೆಗೆ ನಡೆದ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸ್ಥಾಪಕಾಧ್ಯಕ್ಷರಾಗಿ ಡಾ.ಭಾಸ್ಕರಾನಂದ ಕುಮಾರ್, ಉಪಾಧ್ಯಕ್ಷ ಭುವನ ಪ್ರಸಾದ ಹೆಗ್ಡೆ ಮನೋರಮ ಎಸ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರ್, ಜತೆ ಕಾರ್ಯದರ್ಶಿ ಮೋಹನ್ ಶೆಟ್ಟಿ ಮೂಡ ನಿಡಂಬೂರು, ರಶ್ಮಿ ರಮೇಶ್ ಶೆಣೈ, ಸಂತೋಷ್ ಕುಮಾರ್, ಕೋಶಾಧಿಕಾರಿ ಚೈತನ್ಯ ಎಂ.ಜಿ., ಸಂಘಟನಾ ಕಾರ್ಯದರ್ಶಿಗಳಾಗಿ ಲಕ್ಷ್ಮೀಕಾಂತ್ ಬೆಸ್ಕೂರ್, ದಿವಾಕರ್ ಸನಿಲ್, ಮನೋಹರ್ ಶೆಟ್ಟಿ ತೋನ್ಸೆ ಸರೋಜ ಯಶ್ವಂತ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸದಾಶಿವ ಭಟ್ ಆಯ್ಕೆಯಾದರು.