ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಕೇಳಿ ಬಂದಿದೆ.
ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಕಚೇರಿ ತಲುಪುವ ವೇಳೆ ಕಾರಿನಿಂದ ಇಳಿಯುವಾಗ, ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಈ ಪ್ರಕರಣದಲ್ಲಿ ಸ್ವಾಮೀಜಿ ಒಬ್ಬರಿದ್ದಾರೆ. ಅವರ ಬಂಧನವಾದ ಮೇಲೆ ಎಲ್ಲಾ ಸತ್ಯ ಹೊರಗಡೆ ಬರುತ್ತದೆ. ದೊಡ್ಡ-ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ.
ಗೋವಿಂದ ಬಾಬು ಪೂಜಾರಿ ಮೇಲೆ ಚೈತ್ರಾ ಆರೋಪಿಸಿದ್ದಾರೆ. ಗೋವಿಂದ ಬಾಬು 2017 ರಿಂದ ಇಂದಿರಾ ಕ್ಯಾಂಟೀನ್ ನಡೆಸುತ್ತಿದ್ದಾರೆ. ಸುಮಾರು 98 ಇಂದಿರಾ ಕ್ಯಾಂಟೀನ್ಗಳನ್ನು ಗುತ್ತಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.