Saturday, July 27, 2024
Homeಸುದ್ದಿಕರಾವಳಿಚೈತ್ರಾ ಕುಂದಾಪುರ ಮೇಲೆ ಗರಂ ಆದ ಶೋಭಾಕ್ಕ ಹೇಳಿದ್ದೇನು..!??

ಚೈತ್ರಾ ಕುಂದಾಪುರ ಮೇಲೆ ಗರಂ ಆದ ಶೋಭಾಕ್ಕ ಹೇಳಿದ್ದೇನು..!??

ಉಡುಪಿ : ಚೈತ್ರಾ ಕುಂದಾಪುರ ಅವರ ಕೋಟಿ, ಕೋಟಿ ವಂಚನೆ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ ರಾಜಕೀಯ ವಲಯದಲ್ಲಿ ಚೈತ್ರಾ ಕುಂದಾಪುರ ಅವರು ಬಿಜೆಪಿ ಟಿಕೆಟ್‌ಗಾಗಿ ಲಾಬಿ ನಡೆಸಿದ ವಿಚಾರ ಕೂಡ ಚರ್ಚೆಯಾಗುತ್ತಿದೆ. ಚೈತ್ರಾ ಕುಂದಾಪುರ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗುತ್ತದೆ ಅಂತ ಹೇಳುತ್ತಿದ್ದರಂತೆ. ಈ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ. ಈ ಕ್ಷೇತ್ರದಲ್ಲಿ ಚೈತ್ರಾ ಕುಂದಾಪುರ ಅವರು ಹಿಂದೂ ಕಾರ್ಯಕರ್ತೆಯಾಗಿ ಸಂಚಲನ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಟಿಕೆಟ್ ನನಗೆ ಸಿಗುತ್ತದೆ ಅಂತ ಚೈತ್ರಾ ಕುಂದಾಪುರ ಅವರು ಹೇಳುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿರೋ ಶೋಭಾ ಕರಂದ್ಲಾಜೆ ಅವರು, ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನಾಯಕತ್ವ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ. ನಾನು ಸ್ಪರ್ಧೆ ಮಾಡುತ್ತೇನೆ. ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದ್ದಾರೆ.

ಚೈತ್ರ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಅಷ್ಟೇ. ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ವಂಚನೆ ಪ್ರಕರಣದ ನಿಷ್ಪಕ್ಷವಾಗಿ ತನಿಖೆಯಾಗಲಿ. ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು. ಚೈತ್ರಾ ಕುಂದಾಪುರ ಜೊತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನಗೆ ಚೈತ್ರಾ ಫೋನ್ ಮಾಡಿಲ್ಲ. ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದರು.

ಬಿಜೆಪಿ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು ಈ ಲಿಂಕ್‌ ಬಗ್ಗೆಯೂ ತನಿಖೆ ಆಗಬೇಕು. ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ. ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆಯೂ ಬರುವುದೂ ಇಲ್ಲ. ಅಂತಹ ಪಾರ್ಟಿ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News