Monday, May 27, 2024
Homeಸುದ್ದಿಖ್ಯಾತ ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣು

ಖ್ಯಾತ ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣು

ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನ್ನೆರಡನೇ ತರಗತಿ ಓದುತ್ತಿದ್ದ ಮೀರಾ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು. 16ರ ವಯಸ್ಸಿನ ಮೀರಾ ಬೆಳಗ್ಗೆ ತಮ್ಮ ಮಲಗುವ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಬೆಳಗ್ಗೆ ಆಕೆಯ ಕೋಣೆಯ ಬಾಗಿಲು ತುಂಬಾ ಹೊತ್ತಾದರೂ ತೆರೆಯದೇ ಇರುವ ಕಾರಣಕ್ಕಾಗಿ, ಬಾಗಿಲು ತೆರೆದು ನೋಡಿದಾಗ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೀರಾ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲಿ ಮೀರಾ ಪ್ರಾಣಬಿಟ್ಟಿದ್ದರು.

ಶಾಲೆಯಲ್ಲಿ ಉತ್ತಮ ಅಂಕಗಳನ್ನೇ ಪಡೆಯುತ್ತಿದ್ದ ಮೀರಾ, ಮಾನಸಿಕ ಖಿನ್ನತೆಗೆ ಜಾರುವುದಕ್ಕೆ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ವಿಜಯ್ ಆಂಟೋನಿ ಮತ್ತು ಫಾತಿಮಾ ದಂಪತಿಯ ಮೊದಲ ಮಗು ಮೀರಾ, ಈ ದಂಪತಿಗೆ ಮತ್ತೊಬ್ಬ ಮಗನಿದ್ದಾನೆ. ವಿಜಯ್ ಆಂಟೋನಿ ತಮಿಳು ಚಿತ್ರರಂಗದಲ್ಲಿ ನಟ, ಸಂಗೀತ ನಿರ್ದೇಶಕ, ನಿರ್ಮಾಪಕರಾಗಿ ಪ್ರಸಿದ್ಧಿ ಪಡೆದಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News