Tuesday, September 10, 2024
Homeಸುದ್ದಿವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ನವದೆಹಲಿ, ಸೆ 19: ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಈ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಸೂದೆ ಮಂಡಿಸಿದ್ದು, ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ.

ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳಾ ಮೀಸಲಾತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದು ಮಹಿಳಾ ನೇತೃತ್ವದ ಅಭಿವೃದ್ಧಿಯ ಕಡೆಗೆ ತೆಗೆದುಕೊಂಡ ಸಕಾರಾತ್ಮಕ ಹೆಜ್ಜೆ ಎಂದರು.

ಇನ್ನು ಈ ಹಿಂದೆಯೂ ಸಂಸತ್ತು ಈ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದೆ. ಆದರೆ ಹಿಂದಿನ ಸರ್ಕಾರಗಳು ಈ ಮಸೂದೆಯನ್ನು ತರಲು ವಿಫಲವಾಗಿತ್ತು ಎಂದು ಮೋದಿ ತಿಳಿಸಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News