Wednesday, September 18, 2024
Homeಸುದ್ದಿಕರಾವಳಿಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ : ಹಾಲಶ್ರೀ ಮಠದಲ್ಲಿ ಮಹಜರು

ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ : ಹಾಲಶ್ರೀ ಮಠದಲ್ಲಿ ಮಹಜರು

ವಿಜಯನಗರ : ಚೈತ್ರಾ ಕುಂದಾಪುರ ಮತ್ತು ಅವರ ಗ್ಯಾಂಗ್ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ತೆಗೆಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹೊಸಪೇಟೆ ಸಂಸ್ಥಾನ ಮಠದ ಸ್ವಾಮೀಜಿ ಅಭಿನವ ಹಾಲಶ್ರೀ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬುಧವಾರ ರಾತ್ರಿ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಗಡಗಲಿ ಮಠದಲ್ಲಿ ಮಹಜರು ನಡೆಸಿದ್ದಾರೆ.

ಸಿಸಿಬಿ ಪೊಲೀಸರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಮಹಾಸಂಸ್ಥಾನ ಮಠದಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದ್ದಾರೆ.

ಇನ್ನು ಮಠದ ಒಳಗೆ ಹೋಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿಯನ್ನೊಬ್ಬರನ್ನೇ ರೂಂ ನೊಳಗೆ ಕರೆದುಕೊಂಡು ಹೋಗಿ ಮಹಜರು ಮಾಡಿದ್ದು, ಹಾಲಶ್ರೀ ಜೊತೆಗೆ ಕುಟುಂಬಸ್ಥರು ಮಾತನಾಡಲು ಅವಕಾಶ ಕೇಳಿದರು. ಒಳಗಡೆ ಅವಕಾಶ ಇಲ್ಲ, ಹೊರಗಡೆ ಬಂದಾಗಲೇ ಮಾತನಾಡಲು ಹೇಳಿದರು. ಆದರೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಹಾಲಶ್ರೀ ಮುಜುಗರಗೊಂಡಿದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News