Wednesday, April 24, 2024
Homeಸುದ್ದಿಸುಳ್ಯ: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ: ವಿದ್ಯಾರ್ಥಿ ಸಾವು

ಸುಳ್ಯ: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ: ವಿದ್ಯಾರ್ಥಿ ಸಾವು

ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ (19) ಮೃತಪಟ್ಟ ವಿದ್ಯಾರ್ಥಿ.

ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡತ್ತಿರುವ ತೇಜಸ್‌ ಎಂಬ ಯುವಕನ ಜೊತೆ ಇಂದು ಬೆಳಗ್ಗೆ ಕಲ್ಲುಗುಂಡಿಯಿಂದ ಬೈಕ್‌ನಲ್ಲಿ ಪ್ರತೀಕ್ ಸುಳ್ಯದ ಕಡೆಗೆ ಬರುತ್ತಿದ್ದರು. ಈ ವೇಳೆ ಪರಿವಾರಕಾನ ತಿರುವಿನಲ್ಲಿ ಆಟೋರಿಕ್ಷಾವೊಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದು, ಕೂಡಲೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ವೇಳೆಗಾಗಲೇ ಪ್ರತೀಕ್ ಮೃತಪಟ್ಟರು. ಗಂಭೀರ ಗಾಯಗೊಂಡಿರುವ ತೇಜಸ್‌ರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News