ಬೆಂಗಳೂರು : ರಾಜ್ಯ ಬಿಜೆಪಿ ಘಟಕಕ್ಕೆ ಈ ವಾರದಲ್ಲಿಯೇ ಹೊಸ ಅಧ್ಯಕ್ಷರ ನೇಮಕ ಆಗುವ ಸಾಧ್ಯತೆಗಳು ಇವೆ.
ಪುದುಚೇರಿ, ನಾಗಾಲ್ಯಾಂಡ್, ಮೇಘಾಲಯ ರಾಜ್ಯ ಘಟಕಗಳಿಗೆ ಅಧ್ಯಕ್ಷರ ನೇಮಕವನ್ನು ಬಿಜೆಪಿ ವರಿಷ್ಠರು ಈಗಾಗಲೇ ಮಾಡಿದ್ದಾರೆ. ಹೀಗಾಗಿ ರಾಜ್ಯ ಘಟಕಕ್ಕೆ ಹೊಸ ನಾಯಕನನ್ನು ನೇಮಕ ಮಾಡುವ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಬಿ.ವೈ. ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡುತ್ತಾರೆ ಎಂಬ ಮಾತು ಭಾರೀ ಚರ್ಚೆಯಾಗುತ್ತಿದೆ.
ಇದಕ್ಕೆ ಪೂರಕ ಎಂಬಂತೆ ಪಕ್ಷ ಚಟುವಟಿಕೆಯಲ್ಲಿ ಯಡಿಯೂರಪ್ಪ ಮತ್ತೆ ಸಕ್ರಿಯರಾಗಿದ್ದಾರೆ.
ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ..!??
