Saturday, July 27, 2024
Homeಸುದ್ದಿಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು

ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು

ಉಳ್ಳಾಲ, ಸೆ.28: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ನಿನ್ನೆ ಸಂಜೆ ಹೊತ್ತಿಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ವ್ಯಾಪಾರ ಮಾಡುತ್ತಿದ್ದರೆ ಕೆಜಿಗೆ ರೂ. 200 ರಷ್ಟಿದೆ. ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೇ , ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News