Monday, May 27, 2024
Homeಸುದ್ದಿಕನ್ನಡ ಬಿಗ್ ಬಾಸ್ 10: ಪ್ರಸಾರವಾಗುವ ವೇಳೆ ಯಾವುದು..?

ಕನ್ನಡ ಬಿಗ್ ಬಾಸ್ 10: ಪ್ರಸಾರವಾಗುವ ವೇಳೆ ಯಾವುದು..?

ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಹಲವು ಪ್ರೋಮೋಗಳನ್ನು ರಿಲೀಸ್ ಮಾಡುವ ಮೂಲಕ ವಾಹಿನಿಯು ಪ್ರೇಕ್ಷಕರಲ್ಲಿ ಕುತೂಹಲವನ್ನುಂಟು ಮಾಡುತ್ತಿದೆ. ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಅದು ಹೇಳಿಕೊಂಡಿದೆ.

ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.

ಮರುದಿನದಿಂದ ಪ್ರತಿ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.

ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಾವಾಗ ಎಂಬುದಕ್ಕೆ ಈಗಾಗಲೇ ಉತ್ತರ ಸಿಕ್ಕಿದೆ. ಅಕ್ಟೋಬರ್ 8ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಶುರುವಾಗಲಿದೆ.

ವಾಹಿನಿಯ ‘ಅನುಬಂಧ 2023’ ಅವಾರ್ಡ್ಸ್ ಸಮಾರಂಭದಲ್ಲಿ ಬಿಗ್ ಬಾಸ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಾರೆಲ್ಲಾ ಬಿಗ್ ಬಾಸ್ ಮನೆಯೊಳಗಡೆ ಹೋಗಲಿದ್ದಾರೆ ಎಂಬ ಪ್ರಶ್ನೆ ಏಳೋದು ಸಹಜ. ಮೊದಲ ಬಾರಿಗೆ ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಮೊದಲ ಸ್ಪರ್ಧಿಯನ್ನು ಕಲರ್ಸ್ ವಾಹಿನಿ ರಿವೀಲ್ ಮಾಡಿದೆ.

ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ.

ಬೆಸ್ಟ್ ರೇಟೆಡ್ ಚಲನಚಿತ್ರ – 777 ಚಾರ್ಲಿ. ಬಿಗ್ ಬಾಸ್ ಕನ್ನಡ ಸೀಸನ್ 10 ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿರೋ ಚಾರ್ಲಿ..!!

ಅಭಿನಂದನೆಗಳು ಚಾರ್ಲಿ ಎಂದು ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಚಾರ್ಲಿ ಮೊದಲ ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಡುತ್ತಿದೆ. ಅಂದಹಾಗೆ, 777 ಚಾರ್ಲಿ (777 charlie) ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆ ಚಾರ್ಲಿ ಕೂಡ ಮನೋಜ್ಞವಾಗಿ ಅಭಿನಯಿಸುವ ಪ್ರೇಕ್ಷಕರ ಮನಗೆದ್ದಿತ್ತು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News