ಬೆಂಗಳೂರು, ಸೆ 28: ಸೆಪ್ಟಂಬರ್ 29ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.
ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ.
ಇನ್ನು ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.
ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಒಕ್ಕೂಟ ನೀಡಿದೆ.