ಶಿವಮೊಗ್ಗ, ಅ.02: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ದದಲ್ಲಿ ಕಲ್ಲು ತೂರಾಟ ನಡೆದಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಕೂಡ ಜಾರಿ ಮಾಡಲಾಗಿದೆ.
ಮೆರವಣಿಗೆ ಮಧ್ಯೆ ಕಲ್ಲು ತೂರಾಟ ನಡೆದಿದ್ದರಿಂದ ಯುವಕನೊಬ್ಬನ ತಲೆಗೆ ಪೆಟ್ಟು ಬಿದ್ದಿದೆ. ಹೀಗಾಗಿ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಕೆಲ ಪೊಲೀಸರ ಮೇಲೂ ಕಲ್ಲು ಎಸೆದರು.
ಎಸ್ಪಿ ಮಿಥುನ್ ಕುಮಾರ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಓರ್ವ ಪೊಲೀಸ್ ಹಾಗೂ ಮೂವರು ಯುವಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗದ ರಾಗಿಗುಡ್ದ ಬಡಾವಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಸ್ಥಳಕ್ಕೆ ಆರ್ಎಎಫ್ ತುಕಡಿ, ಪೊಲೀಸ್ ಪಡೆ ಆಗಮಿಸಿದ್ದು, ಮುಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.