ಹೋಮ್‌ ವರ್ಕ್‌ ಮಾಡಿಲ್ಲವೆಂದು ತಲೆಗೆ ಹೊಡೆದ ಶಿಕ್ಷಕ; ಯುಕೆಜಿ ವಿದ್ಯಾರ್ಥಿ ಸಾವು

ಹೈದರಾಬಾದ್, ಅ 03: ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದು ವರದಿಯಾಗಿದೆ.

ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ.

ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ.

ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್‌ ಸೋಮವಾರ ಮೃತಪಟ್ಟಿದ್ದಾರೆ.

ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯ ಮಾಡಿದ್ದಾರೆ.

You cannot copy content from Baravanige News

Scroll to Top