Wednesday, September 18, 2024
Homeಸುದ್ದಿಆತ್ಮಹತ್ಯೆ ಯತ್ನದ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‍ಐಆರ್

ಆತ್ಮಹತ್ಯೆ ಯತ್ನದ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‍ಐಆರ್

ಬೆಂಗಳೂರು, ಅ.: ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ಸರಕಾರ ಸ್ಪಷ್ಟೀಕರಣ ನೀಡುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ, ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯದೇ ಹಠ ಮಾಡುತ್ತಿದ್ದು, ಅವರ ವಿರುದ್ಧ ಆತ್ಮಹತ್ಯೆ ಯತ್ನದ ಆರೋಪದಡಿ ಉಪ್ಪಾರಪೇಟೆ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಲಾಗಿದೆ.

ಸರಕಾರದ ವಿರುದ್ಧ ನಗರದ ಫ್ರೀಡಂ ಪಾರ್ಕ್‍ನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದ ಪುನೀತ್ ಕೆರೆಹಳ್ಳಿ, ತನ್ನ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ,ರೌಡಿಪಟ್ಟಿ ತೆರೆಯಲಾಗಿದೆ. ಸರಕಾರ ಇದಕ್ಕೆ ಸೂಕ್ತ ಕಾರಣ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

2013ರಿಂದ 2023ರ ವರೆಗೆ ಪುನೀತ್ ಕೆರೆಹಳ್ಳಿ ವಿರುದ್ಧ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಪದೇ ಪದೇ ಭಾಗಿಯಾಗಿರುವ ಆರೋಪದಲ್ಲಿ ಕ್ರಿಮಿನಲ್ ಪ್ರಕರಣಗಳಿದ್ದವು.ಈ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಕೇಸು ದಾಖಲಿಸಿದ್ದರು.

ಇದೀಗ ಉಪವಾಸದಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರ ದಾಖಲಿಸಿದ್ದಾರೆ. ಆದರೆ ಅನ್ನ, ನೀರು ಸೇವಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಪುನೀತ್ ಕೆರೆಹಳ್ಳಿ, ನನ್ನ ಪ್ರಾಣ ಹೋಗಲಿ, ಸರಕಾರ ಸ್ಪಷ್ಟೀಕರಣ ನೀಡುವವರೆಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯದೇ ಹಾಗೆ ಇರುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News