Wednesday, April 24, 2024
Homeಸುದ್ದಿಕರಾವಳಿಕಾಪು : ಮಲ್ಲಾರು ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ಪುರಸ್ಕಾರಕ್ಕೆ ಆಯ್ಕೆ

ಕಾಪು : ಮಲ್ಲಾರು ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ಪುರಸ್ಕಾರಕ್ಕೆ ಆಯ್ಕೆ

ಕಾಪು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ನಡೆದ ಇನ್‌ಸ್ಪಾಯರ್‌ ಅವಾರ್ಡ್‌ ಮಾನಕ್‌ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಪು ತಾಲೂಕಿನ ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ಬೇಬಿ ರಿಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರು ತಯಾರಿಸಿದ ಮನೆಯಲ್ಲಿ ಉಪಯೋಗಿ ಸಬಹುದಾದ “ದಹನಕಾರಕ’ ಮಾದರಿಗೆ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುವ ಅವಕಾಶ ದೊರಕಿದ್ದು ಅ. 9ರಿಂದ 11ರ ವರೆಗೆ ದಿಲ್ಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಜೋಯ್ಸ ಎಂ. ಅಲ್ಫೋನ್ಸೊ ಮಾರ್ಗದರ್ಶಕ ನೋಡಲ್‌ ಶಿಕ್ಷಕಿಯಾಗಿ ಪಾಲ್ಗೊಳ್ಳಲಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News