ಉಡುಪಿ : ತಂದೆಯನ್ನೇ ಕೊಲೆಗೈದ ಪ್ರಕರಣ ; ಆರೋಪಿ ಮಗ ಅರೆಸ್ಟ್‌

ಉಡುಪಿ (ಅ 08) : ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿ ಆನಂದ ಮರಕಾಲ(50) ಎಂಬಾತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಈತ ತನ್ನ ತಂದೆ ಸಾಧು ಮರಕಾಲ(68) ಅವರನ್ನು ಅ.7ರಂದು ಮನೆಯಲ್ಲಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದನು. ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಪಿ.ಎಂ. ನೇತೃತ್ವದಲ್ಲಿ ಆರೋಪಿಯನ್ನು ಉಪ್ಪೂರು ಎಂಬಲ್ಲಿ ಬಂಧಿಸಲಾಗಿದೆ.

ಮನೆಗೆ ಬಂದು ತಂದೆ ಜೊತೆ ಆಗ್ಗಾಗೆ ಗಲಾಟೆ ಮಾಡುತ್ತಿದ್ದ ಆನಂದ, ಸಾಧು ಅವರನ್ನು ಮನೆಯಿಂದ ಹೊರ ಹಾಕಬೇಕೆಂದು ದ್ವೇಷವನ್ನು ಹೊಂದಿದ್ದನು. ಇದೇ ದ್ವೇಷದಿಂದ ಆತ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

You cannot copy content from Baravanige News

Scroll to Top