Saturday, July 27, 2024
Homeಸುದ್ದಿರಾಜ್ಯಐತಿಹಾಸಿಕ ಮೈಸೂರು ದಸರಾಕ್ಕೆ ಕ್ಷಣಗಣನೆ : ಹಂಸಲೇಖರಿಂದ ನಾಳೆ ಚಾಲನೆ

ಐತಿಹಾಸಿಕ ಮೈಸೂರು ದಸರಾಕ್ಕೆ ಕ್ಷಣಗಣನೆ : ಹಂಸಲೇಖರಿಂದ ನಾಳೆ ಚಾಲನೆ

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ (ಅ.15) ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತ ಚಾಲನೆ ದೊರೆಯಲಿದೆ.

ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದಲ್ಲೇ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಉತ್ಸವಕ್ಕೆ ಕ್ಷಣಗಣನೆ ಬಾಕಿಯಿದ್ದು, ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News