ಹಮಾಸ್ ಉಗ್ರರಿಗೆ ಬೆಂಬಲಿಸಿ ವಿಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿ ಪೊಲೀಸರ ವಶಕ್ಕೆ

ಮಂಗಳೂರು, ಅ 14: ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.

ಹಮಾಸ್ ಉಗ್ರರನ್ನು ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

You cannot copy content from Baravanige News

Scroll to Top