Wednesday, May 22, 2024
Homeಸುದ್ದಿಮಾನವ ಸಹಿತ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

ಮಾನವ ಸಹಿತ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

ನವದೆಹಲಿ, ಅ 16: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾನವ ಸಹಿತ ಗಗನಯಾನಕ್ಕೆ ಸಜ್ಜಾಗಿದ್ದು, ಅಕ್ಟೋಬರ್ 21 ರಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್) ಯಶಸ್ಸಿನ ಬಳಿಕ ಇದೀಗ ಅ.21 ರಂದು ಬೆಳಗ್ಗೆ 7 ಮತ್ತು 9 ಗಂಟೆ ನಡುವಿನಲ್ಲಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಲ್ಲಿ ಮಾನವರಹಿತ ಗಗನಯಾನ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ.

ಇನ್ನು ಅ.21 ರಂದು ಟಿವಿ-ಡಿ1 ಪರೀಕ್ಷಾರ್ಥ ಉಡಾವಣೆ ಮಾಡಲಾಗುವುದು. ಇದರ ಬಳಿಕ ಟಿವಿ-ಡಿ2, ಟಿವಿ-ಡಿ3 ಮತ್ತು ಟಿವಿ-ಡಿ4 ಹೀಗೆ ಇನ್ನೂ ಮೂರು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News