Friday, April 19, 2024
Homeಸುದ್ದಿಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

ಕಾರ್ಕಳ, ಸೆ 27 : ಹಿರ್ಗಾನ ಚಿಕ್ಕಲ್ಬೆಟ್ಟು ಸಮೀಪದ ದುಗ್ಗಣರಾಯ ಚಡಾವು ಬಳಿ ಮತ್ತೆ ಅಪಘಾತ ಸಂಭವಿಸಿದೆ.

ಮಂಗಳೂರಿನಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆ ಬದಿಯಲ್ಲಿ ಮೋರಿ ಕುಸಿತವಾದ ಕಾರಣ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಆದರೆ ಅವೈಜ್ಞಾನಿಕವಾಗಿ ಬ್ಯಾರಿಕೆಡ್‌ಗಳನ್ನು ರಸ್ತೆ ಬದಿ ನಿಲ್ಲಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಪಲ್ಟಿ ಹೊಡೆದಿದೆ.

ಕರ್ನಾಟಕ ಲೋಕೋಪಯೋಗಿ ಇಲಾಕೆಯ ಅಧೀನದಲ್ಲಿ ಇರುವ ಈ ರಸ್ತೆಯು ಈಗಾಗಲೇ ಅಪಾಯಕಾರಿಯಾಗಿ ಪರಿಣಮಿಸಿದ್ದು ಕಳೆದ ಹತ್ತು ದಿನಗಳಲ್ಲಿ ಮೂರಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಪ್ರಾಣಕಳೆದುಕೊಂಡಿದ್ದನು.ಈ ಬಗ್ಗೆ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News