Wednesday, May 29, 2024
Homeಸುದ್ದಿಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ದೊಡ್ಮನೆಯಿಂದಲೇ ಎತ್ತಾಕೊಂಡು ಹೋದ ಅರಣ್ಯಾಧಿಕಾರಿಗಳು..!

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್; ದೊಡ್ಮನೆಯಿಂದಲೇ ಎತ್ತಾಕೊಂಡು ಹೋದ ಅರಣ್ಯಾಧಿಕಾರಿಗಳು..!

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿ ಒಬ್ಬ ದೊಡ್ಮನೆಯಲ್ಲಿ ಅರೆಸ್ಟ್ ಆಗಿದ್ದಾರೆ.

ವರ್ತೂರು ಸಂತೋಷ್​​ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ಇದೆ. ಬಿಗ್​ಬಾಸ್ ಮನೆಗೆ ಏಕಾಏಕಿಯಾಗಿ ಎಂಟ್ರಿಕೊಟ್ಟ ಅರಣ್ಯಾಧಿಕಾರಿಗಳು ಸಂತೋಷ್​ನನ್ನು ಬಂಧಿಸಿದ್ದಾರೆ

ಸದ್ಯ ಬಿಗ್ ಬಾಸ್ ಮನೆಯಿಂದ ಆರೋಪಿಯನ್ನು ಕರೆದುಕೊಂಡು ಹೋಗಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ರಾಮೋಹಳ್ಳಿ ಅರಣ್ಯಾಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಸಂತೋಷ್​​ನನ್ನು ಬಂಧಿಸಿದ್ದಾರೆ.

ವರದಿಗಳ ಪ್ರಕಾರ ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧಿಸಲಾಗಿದೆ. ಸಂತೋಷ್ ಅವರು ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ವ್ಯಕ್ತಿಯೊಬ್ಬರು ಎಫ್​ಐಆರ್ ದಾಖಲಿಸಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News