ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್; ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

ಬೆಂಗಳೂರು, ಅ.23: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂಬ ವಿಚಾರ ಪಕ್ಷದ ಒಳಗೆ ಗುಸು ಗುಸು ಚರ್ಚೆ ಶುರುವಾಗಿದೆ.

ಈ ಮೂಲಕ ಬಿಜೆಪಿ ಹೈಕಮಾಂಡ್ ಸ್ತ್ರೀಶಕ್ತಿ ಅಸ್ತ್ರ್ರ ಪ್ರಯೋಗಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.

ಮಂಗಳವಾರ ಅಥವಾ ಬುಧವಾರದ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬಂದಿದೆ.

ಹಿಂದುತ್ವ ಫೈರ್ ಬ್ರ್ಯಾಂಡ್, ಮಹಿಳಾ ಮತದಾರರ ಚಿತ್ತ, ಒಕ್ಕಲಿಗ ಅಸ್ತ್ರ ಪ್ರಯೋಗವಾಗಲಿದೆ ಎನ್ನಲಾಗಿದ್ದು, ಒಟ್ಟಿನಲ್ಲಿ ಸಿದ್ದರಾಮಯ್ಯ, ಡಿಕೆಶಿಯನ್ನ ಎದುರಿಸಬಲ್ಲ ಸ್ತ್ರೀಶಕ್ತಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಮೆಗಾ ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

You cannot copy content from Baravanige News

Scroll to Top