Saturday, July 27, 2024
Homeಸುದ್ದಿನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಶವ ಬಾವಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಶವ ಬಾವಿಯಲ್ಲಿ ಪತ್ತೆ

ಉಡುಪಿ,ಅ.23: ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಶೃತಿನ್ ಶೆಟ್ಟಿ ಅಕ್ಟೋಬರ್ 19 ಕ್ಕೆ ನಾಪತ್ತೆಯಾಗಿದ್ದರು. ಆದರೆ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೃತಿನ್ ಶೆಟ್ಟಿ 2008ರ ಬ್ಯಾಚ್ ನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅಕ್ಟೋಬರ್ 18-19 ಕ್ಕೆ ರಜೆ ಪಡೆದಿದ್ದರು. ಆದರೀಗ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News