(ಡಿ.3) : ಶಿರ್ವ ಸೂರ್ಯಚಂದ್ರ ಜೋಡುಕರೆ ಕಂಬಳ

ಶಿರ್ವ : ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 28ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ಡಿ. 3 ರಂದು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ.

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪ್ರಫುಲ್ಲ ಶೆಟ್ಟಿಯವರು ಕಂಬಳವನ್ನು ಉದ್ಘಾಟಿಸಲಿರುವರು.

ಶಿರ್ವ ನಡಿಬೆಟ್ಟು ಮನೆತನದ ಯಜಮಾನ ದಾಮೋದರ ಚೌಟ ಅವರ ಮುಂದಾಳತ್ವದಲ್ಲಿ ವ್ಯವಸ್ಥಾಪಕ ಶಿರ್ವ ನಡಿಬೆಟ್ಟು ಶಶಿಧರ ಹೆಗ್ಡೆಯವರು ಊರವರ ಸಹಕಾರದೊಂದಿಗೆ ಕಂಬಳ ನಡೆಸಿಕೊಂಡು ಬರುತ್ತಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

You cannot copy content from Baravanige News

Scroll to Top