ಮೂಲ್ಕಿ:’ಹಠಾತ್ತನೆ ಬಂದ ರೈಲು’; ತನಿಖೆಗಾಗಿ ಮೇಲ್ಸೇತುವೆಯಲ್ಲಿದ್ದ ಪೊಲೀಸರು ಪವಾಡ ಸದೃಶ ಪಾರು

ಮೂಲ್ಕಿ, ಅ 26: ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಭಾನುವಾರ ರಾತ್ರಿ 8.30ರ ಸುಮಾರಿಗೆ ಮುಲ್ಕಿ ರೈಲು ನಿಲ್ದಾಣದ ಸಿಬ್ಬಂದಿ ಆಗಿರುವ ಕುಮಾರ್ ಎಂಬುವವರ ಪುತ್ರ ವಿಶ್ಲೇಷ್ (26) ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾನುವಾರ ರಾತ್ರಿ 8:30 ಸುಮಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರೈಲಿಗೆ ತಲೆ ಕೊಟ್ಟುವಿಶ್ಲೇಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಶ್ಲೇಷ್ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಸುರತ್ಕಲ್ ಎನ್‌ಐಟಿಕೆ ಸುರತ್ಕಲ್‌ನಲ್ಲಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಕೆಲಸ ಸಿಗದ ಹಿನ್ನಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಯುವಕನ ಆತ್ಮಹತ್ಯೆ ತೀವ್ರ ಇಕ್ಕಟ್ಟಾಗಿರುವ ಕುಬೆವೂರು ರೈಲ್ವೆ ಮೇಲ್ವೇತುವೆ ಕೆಳಗಡೆ ನಡೆದಿದ್ದು, ತನಿಖೆಗಾಗಿ ಮೂಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಎಸ್‌ಐ ಸಂಜೀವ, ಚಂದ್ರಶೇಖರ್, ಶಂಕರ್ ಬಸವರಾಜ್ ತೆರಳಿದ್ದರು.

ತನಿಖೆ ನಡೆಸುತ್ತಿರುವ ಸಂದರ್ಭ ಹಠಾತ್ತನೆ ರೈಲು ಬಂದಿದ್ದು ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಬದಿಗೆ ಹಾರಿ ತಪ್ಪಿಸಿಕೊಂಡು ಪವಾಡ ಸದೃಶರಾಗಿ ಪಾರಾಗಿದ್ದಾರೆ.

You cannot copy content from Baravanige News

Scroll to Top