ಉಡುಪಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಟೋಬರ್ 28ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರು ಮೂಲಕ ಮಧ್ಯಾಹ್ನ 1 ಗಂಟೆಗೆ ಉಡುಪಿ ತಲುಪಲಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಸಿದ್ಧರಾಮಯ್ಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ತೆರಳಲಿದ್ದಾರೆ.