Saturday, July 27, 2024
Homeಸುದ್ದಿಅಕ್ಟೋಬರ್ 29 ರಿಂದ ನವೆಂಬರ್ 1 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಅಕ್ಟೋಬರ್ 29 ರಿಂದ ನವೆಂಬರ್ 1 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು,ಅ.28: ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೆ ಇದೀಗ ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 1 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದ್ದು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ಮೈಲಾಡುತುರೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಪುದುಕ್ಕೊಟ್ಟೈನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News