ಮುಲ್ಕಿ : ಮನೆ ಕೋಣೆಯಲ್ಲಿ ತಾಯಿ ಮೃತದೇಹ ಪತ್ತೆ : ಮಗ ಅರೆಸ್ಟ್

ಮುಲ್ಕಿ : ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೃತ ಮಹಿಳೆಯನ್ನು ರತ್ನ ಶೆಟ್ಟಿ (60) ಎಂದು ಗುರುತಿಸಲಾಗಿದ್ದು, ಆಕೆಯ ಮಗ ಆರೋಪಿಯನ್ನು ರವಿರಾಜ್ ಶೆಟ್ಟಿ(33) ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆ ರತ್ನ ಶೆಟ್ಟಿ ತನ್ನ ಮಗ ರವಿರಾಜ್ ಶೆಟ್ಟಿ ಜೊತೆ ಕಟೀಲು ದುರ್ಗಾ ನಗರದಲ್ಲಿ ಮನೆಯೊಂದರಲ್ಲಿ ವಾಸವಿದ್ದು. ಸ್ಥಳೀಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ನಡುವೆ ಮಗ ರವಿರಾಜ್ ಶೆಟ್ಟಿ ತಾಯಿ ಜೊತೆ ವಾಸ್ತವ್ಯವಿದ್ದ ಕೋಣೆಗೆ ಬೀಗ ಹಾಕಿ ಹೊರಗೆ ಹೋಗಿದ್ದಾನೆ. ರವಿವಾರ ಬೆಳಗ್ಗೆ ಮನೆಯ ಪರಿಸರದಲ್ಲಿ ವಾಸನೆ ಬರುತ್ತಿರುವುದನ್ನು ಕಂಡು ಅನುಮಾನದಿಂದ ಮನೆಯವರು ಮಹಿಳೆ ವಾಸ್ತವ್ಯವಿದ್ದ ಕೋಣೆಯ ಕಿಟಕಿಯಲ್ಲಿ ನೋಡಿದಾಗ ಮಹಿಳೆಯ ಮುಖ ಬಟ್ಟೆಯಿಂದ ಮುಚ್ಚಿದ ಸ್ಥಿತಿಯಲ್ಲಿ ಹಾಗೂ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ತಾಯಿಯ ಶವ ಪತ್ತೆಯಾದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮಗ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿ ರವಿರಾಜ್ ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನೂಪ್ ಅಗರ್ವಾಲ್ , ಎಸಿಪಿ ಮನೋಜ್ ಕುಮಾರ್, ಶ್ವಾನದಳ ಬೆರಳಚ್ಚು ತಜ್ಞರು, ಬಜ್ಪೆ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

You cannot copy content from Baravanige News

Scroll to Top