Tuesday, September 10, 2024
Homeಸುದ್ದಿಕರಾವಳಿ3 ವರ್ಷದ ಬಳಿಕ ಮತ್ತೆಆತ್ಮಹತ್ಯೆಯಿಂದ ಸುದ್ಧಿಯಾದ ನೇತ್ರಾವತಿ ಸೇತುವೆ

3 ವರ್ಷದ ಬಳಿಕ ಮತ್ತೆಆತ್ಮಹತ್ಯೆಯಿಂದ ಸುದ್ಧಿಯಾದ ನೇತ್ರಾವತಿ ಸೇತುವೆ

ಉಳ್ಳಾಲ : ಕಳೆದ ಮೂರು ವರ್ಷಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆ ಇದೀಗ ಮತ್ತೆ ವ್ಯಕ್ತಿಯೋರ್ವರ ಆತ್ಮಹತ್ಯೆಯಿಂದ ಸುದ್ದಿಯಾಗಿದೆ.

2019 ರಲ್ಲಿ ಕೆಫೆ ಡೇ ಮಾಲೀಕ ಸಿದ್ದಾಥ್೯ ಆತ್ಮಹತ್ಯೆ ನಂತರ ಸರಣಿ ಆತ್ಮಹತ್ಯೆಗಳೇ ನೇತ್ರಾವತಿ ಸೇತುವೆಯಲ್ಲಿ ನಡೆದಿತ್ತು.

2020 ರಲ್ಲಿ ಆತ್ಮಹತ್ಯೆ ತಡೆಗಾಗಿ ಮುಡಾ ಅಭಿವೃದ್ಧಿ ಅನುದಾನದ ಮೂಲಕ ತಡೆಬೇಲಿ ಅಳವಡಿಸಲಾಯಿತು. ತದನಂತರ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗಳು ನಿಂತಿತ್ತು. ಇದೀಗ ಮತ್ತೆ ಕೆಫೇ ಡೇ ಮಾಲೀಕ ಸಿದ್ದಾರ್ಥ್ ತವರೂರು ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರ ಆತ್ಮಹತ್ಯೆಯಿಂದ ಮತ್ತೆ ಆತಂಕ ಮೂಡಿಸಿದೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು. ಘಟನಾ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News