Sunday, May 19, 2024
Homeಸುದ್ದಿಉಡುಪಿ: ವಾಣಿಜ್ಯ ತೆರಿಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ..!!

ಉಡುಪಿ: ವಾಣಿಜ್ಯ ತೆರಿಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ..!!

ಉಡುಪಿ, ಅ.30: ಕುಂದಾಪುರದ ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.

ಕುಂದಾಪುರದ ಎಲ್.ಐ.ಸಿ ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲದ ರಾಜೇಶ್ ಬೆಲ್ಕೆರೆಯವರಾಗಿರುವ ರಾಜೇಶ್ ಕುಂದಾಪುರದ ಎಲ್.ಐ.ಸಿ. ರಸ್ತೆಯ ವಡೇರಹೋಬಳ ಅಡ್ಡರಸ್ತೆಯಲ್ಲಿ ಜಾಗ ಖರೀದಿಸಿ ಬೃಹತ್ ಮನೆ ನಿರ್ಮಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಒಟ್ಟು ಎರಡು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಂಕೋಲದ ಬೇಳೆರೆಯಲ್ಲಿಯೂ ದಾಳಿ ನಡೆಸಿದ್ದಾರೆ. ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಕಚೇರಿ ಆರಂಭದ ತಕ್ಷಣ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಸುಮಾರು ಏಳು ಲೋಕಾಯುಕ್ತ ಅಧಿಕಾರಿಗಳ ತಂಡ ರಾಜೇಶ್ ಅವರ ಕುಂದಾಪುರದ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರು ರಾಜೇಶ್ ನಿವಾಸದ ಸಮೀಪ ಆಗಮಿಸುತ್ತಿದ್ದಂತೆ ಮನೆಯ ಹೊರಗಿನ ಗೇಟ್‌ಗೆ ಬೀಗ ಜಡಿಯಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News