ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!

ಉಡುಪಿ : ಜಿಲ್ಲೆಯ ಕಾಪು ಸಮೀಪದ ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್‌ನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪುಗುಡ್ಡೆ ನಿವಾಸಿ ನಿರ್ಮಲಾ (61) ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಗುರುವಾರ ಉದ್ಯಾವರ ಬಿಲ್ಲವ ಮಹಾಜನ ಸಂಘದ ಸಭಾಂಗಣದಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿದ್ದ ನಿರ್ಮಲಾ ಅವರು ಪೂಜೆಯ ಬಳಿಕ ತನ್ನ ದೂರದ ಸಂಬಂಧಿ ದಿನೇಶ್‌ ಅವರ ಬೈಕ್‌ನಲ್ಲಿ ಕುಳಿತು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್‌ನಿಂದ ರಸ್ತೆಗೆ ಬಿದ್ದು ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ನಿರ್ಮಲಾ ಅವರ ಬ್ರೈನ್‌ ಡೆಡ್‌ ಆಗಿರುವುದಾಗಿ ತಿಳಿಸಿದ್ದರಿಂದ ಬಳಿಕ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು.

ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top