ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಪಿತೃ ವಿಯೋಗ

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ಕೃಷ್ಣ ಭಟ್ಟರು ನಿಧನರಾಗಿದ್ದಾರೆ. ಕೃಷ್ಣ ಭಟ್ಟರಿಗೆ 103 ವಯಸ್ಸಾಗಿತ್ತು.



ಅಂಗಡಿಮಾರು ಕೃಷ್ಣ ಭಟ್ಟರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ ಕೃಷ್ಣ ಭಟ್ಟರು. ಇವರು ಐವರು ಪುತ್ರರು, ಆರು ಪುತ್ರಿಯರು ಸೇರಿ ಬಂಧುಬಳಗವನ್ನು ಅಗಲಿದ್ದಾರೆ.

ಕೃಷ್ಣ ಭಟ್ಟರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

You cannot copy content from Baravanige News

Scroll to Top