Wednesday, May 29, 2024
Homeಸುದ್ದಿಶಿರ್ವ: ವಿಶ್ವ ಬ್ರಾಹ್ಮಣ ಯುವ ಸಂಗಮ(ರಿ.) ಇದರ ಮಹಾಸಭೆ ಮತ್ತು ಮಹಿಳಾ ಬಳಗದ ನೂತನ ಪದಾಧಿಕಾರಿಗಳ...

ಶಿರ್ವ: ವಿಶ್ವ ಬ್ರಾಹ್ಮಣ ಯುವ ಸಂಗಮ(ರಿ.) ಇದರ ಮಹಾಸಭೆ ಮತ್ತು ಮಹಿಳಾ ಬಳಗದ ನೂತನ ಪದಾಧಿಕಾರಿಗಳ ಪದಗ್ರಹಣ

ಶಿರ್ವ, ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ ರಿ. ಇದರ ಮಹಾಸಭೆ ಮತ್ತು ಮಹಿಳಾ ಬಳಗದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಪು ಶ್ರೀ ಕಾಳಿಕಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೇಖಾ ಶ್ರೀಕಾಂತ್ ಆಚಾರ್ಯರು ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆ ಮುಂದುವರಿಸಿಕೊಂಡು ಹೋಗುವಲ್ಲಿ ನಮ್ಮ ಪಾತ್ರ ಗಣನೀಯವಾಗಿದೆ ಎಂದು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಆಚಾರ್ಯರು ರಾಜಕೀಯವಾಗಿ ನಾವು ಸಬಲರಾಗಿರಬೇಕಾದರೆ ನಮ್ಮಲ್ಲಿ ಒಗ್ಗಟ್ಟಿರಬೇಕು ಆಗ ಮಾತ್ರ ನಮ್ಮನ್ನು ಸಮಾಜ ಗುರುತಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷ ಸುರೇಶ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಆಚಾರ್ಯ, ನೂತನ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿದರು, ಯುವ ಸಂಗಮದ ಕೋಶಾಧಿಕಾರಿ ಪ್ರಶಾಂತ ಆಚಾರ್ಯ ಲೆಕ್ಕಪತ್ರ ಮಂಡಿಸಿದರು, ಪ್ರೀತಿ ಆಚಾರ್ಯ ವರದಿ ವಾಚಿಸಿದರು. ಮಂಜುಳಾ ಆಚಾರ್ಯ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿ, ಮಾಧವಾಚಾರ್ಯ ಕಾರ್ಯಕ್ರಮ ನಿರೂಪಿಸಿದರು

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News