ಕರಾವಳಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ಸಭೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಮಾಲೋಚನೆ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭಾಗವಹಿಸಿದರು.



ಈ ವೇಳೆ ವಿಧಾನಸಭೆ ಸಭಾಪತಿ ಯು.ಟಿ.ಖಾದರ್, ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಬಂದರು ಹಾಗೂ ಮೀನುಗಾರಿಕೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ, ಕರಾವಳಿ ಭಾಗದ ಶಾಸಕರಾದ ದಿನಕರ್ ಶೆಟ್ಟಿ, ಉಮಾನಾಥ್ ಕೋಟ್ಯನ್, ಶಿವರಾಮ್ ಹೆಬ್ಬಾರ್, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ವೇದವ್ಯಾಸ್ ಕಾಮತ್,‌ಸತೀಶ್ ಸೈಲ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ‌ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

You cannot copy content from Baravanige News

Scroll to Top