Monday, July 15, 2024
Homeಸುದ್ದಿಹಿರಿಯ ಧೀಮಂತ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನ

ಹಿರಿಯ ಧೀಮಂತ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನ

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ.

ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದರು.

ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಟೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಹಲವು ಉದಯೋನ್ಮುಕ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ,ಸರಕಾರದ ಗಮನ ಸೆಳೆಯುವಲ್ಲಿ ಪ್ದಮುಖ ಪಾತ್ರ ವಹಿಸಿದ್ದರು‌.

ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು.ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದ ಇವರಿಗೆ ಹಲವಾರು ರಾಜಕೀಯ ನಾಯಕರನ್ನು ಬೆಳೆಸಿದ ಕೀರ್ತಿ ಸಲ್ಲುತ್ತದೆ.

ಪರಿಸರ ಪ್ರೇಮಿಯೂ ,ಕೃಷಿ ಪ್ರೇಮಿಯೂ ಅಗಿದ್ದ ಇವರು ,ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕರಾವಳಿಯಲ್ಲಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು,ನೆಲ‌ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನೀರು ಅರುವ ಮುನ್ನ ಕಾರ್ಯಕ್ರಮದ ಮೂಂಚಣಿಯಲ್ಲಿದ್ದವರು. ಸಮಾಜಿಕ ಕಳಕಳಿ ಇದ್ದ ನೇರ ನಡೆಯ ಧೀಮಂತ ಪತ್ರಕರ್ತ ಎಂದು ಹೆಸರಾಗಿದ್ದರು.

ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

ಅಂತಿಮ ಅಂತ್ಯಕ್ರಿಯು ಕುಂದಾಪುರ ತಾಲೂಕಿನ ಕಮಲ ಶಿಲೆ ಸಮೀಪದ ಎಡಮೊಗೆಯಲ್ಲಿರುವ ಕುಟುಂಬದ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 9.30 ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News