ದಸರಾದಲ್ಲಿ ಅಪ್ರಾಪ್ತೆ ಪರಿಚಯ, ಮದ್ದೂರು ಲಾಡ್ಜ್ ನಲ್ಲಿ ಅತ್ಯಾಚಾರ; ವಿಡಿಯೋ ಕಳುಹಿಸಿ ಬ್ಲಾಕ್ಮೇಲ್ ಮಾಡಿದ ಕಿರಾತಕರು ಅರೆಸ್ಟ್

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಂತೆ ಮೂವರು ಕಿರಾತಕರನ್ನು ಮದ್ದೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತೆ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಪುನೀತ , ಮಂಜುನಾಥ್, ಸಿದ್ದರಾಜು ಎಂದು ಗುರುತಿಸಲಾಗಿದ್ದು, ಮೂವರು ಮದ್ದೂರು ತಾಲೂಕಿನವರು ಎಂದು ತಿಳಿದುಬಂದಿದೆ.

ಮೈಸೂರು ದಸರಾದಲ್ಲಿ ಪರಿಚಯ

ಮೈಸೂರಿನ ಯುವ ದಸರಾದಲ್ಲಿ ಪುನೀತನಿಗೆ ಅಪ್ರಾಪ್ತೆಯ ಪರಿಚಯವಾಯಿತು. ಬಳಿಕ ಲವ್ ಮಾಡುವುದಾಗಿ ನಂಬಿಸಿ ಆಕೆಯೊಂದಿಗೆ ಸಲುಗೆ ಬೆಳೆಸಿದ್ದನು. ಆ ನಂತರ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರದ ವೇಳೆ ಕಿರಾತಕರು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅಪ್ರಾಪ್ತೆ ಮೊಬೈಲ್ಗೆ ವಿಡಿಯೋ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಕರೆದಾಗಲೆಲ್ಲ ಬರುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ. ಬಳಿಕ ಅಪ್ರಾಪ್ತೆ ಈ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆ ಅಪ್ರಾಪ್ತೆಯ ಪೋಷಕರು ಮದ್ದೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಪ್ರಾಪ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಮೂವರ ಬಂಧನವಾಗಿದೆ. ಅತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಕೇಸ್ ದಾಖಲಾಗಿದೆ. ಸದ್ಯ ಮೂವರನ್ನು ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆಂದು ತಿಳಿದುಬಂದಿದೆ.

You cannot copy content from Baravanige News

Scroll to Top