ಉಡುಪಿ : ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ ಇನ್ನಿಲ್ಲ

ಉಡುಪಿ : ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ (92) ಇಂದು ವಿಧಿವಶರಾಗಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯವರಾಗಿರುವ ಪಿ.ಬಿ ಆಚಾರ್ಯಯವರು ಮಹಾರಾಷ್ಟ್ರದ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಇವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದಲ್ಲಿ ರಾಜ್ಯಪಾಲರಾಗಿದ್ದರು.

ಉಡುಪಿಯ ತೆಂಕಪೇಟೆಯ ಆಚಾರ್ಯ ಮಠದಲ್ಲಿ ಜನಿಸಿರುವ ಪಿ.ಬಿ ಆಚಾರ್ಯ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಅವಿರತಶ್ರಮ ಪಟ್ಟಿದ್ದಾರೆ. ಆರ್ ಎಸ್ ಎಸ್ ಕಾರ್ಯಕರ್ತರಾಗಿಯೂ ಈಶಾನ್ಯ ಭಾರತದ ಮೂಲೆ ಮೂಲೆಯಲ್ಲಿ ಕೆಲಸ ಮಾಡಿದ್ದಾರೆ.

ಸಾಮಾನ್ಯ ಜನರಿಗೆ ರಾಜಭವನ ಮುಕ್ತವಾಗಿ ತೆರೆದಿಟ್ಟವರಾಗಿದ್ದಾರೆ. ಅಲ್ಲದೆ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಶಿಕ್ಷಣ ಕೊಡಿಸುತ್ತಿದ್ದರು.

You cannot copy content from Baravanige News

Scroll to Top