ತೆಲುಗು ಹಿರಿಯ ನಟ ಚಂದ್ರ ಮೋಹನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 82 ವರ್ಷದ ನಟ ಚಂದ್ರ ಮೋಹನ್ ಅವರು ಇಂದು ಬೆಳಗ್ಗೆ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು.
ಇನ್ನು, ನಟನ ಅಗಲಿಕೆಯ ವಿಷಯ ತಿಳಿಯುತ್ತಿದ್ದಂತೆ ತೆಲುಗು ಚಿತ್ರರಂಗದ ಹಲವಾರು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ನಟ ಚಂದ್ರ ಮೋಹನ್ ಅವರು ಪತ್ನಿ ಜಲಂಧರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸೋಮವಾರಂದು ಹೈದರಾಬಾದ್‌ನಲ್ಲಿ ನಟನ ಅಂತಿಮ ವಿಧಿವಿಧಾನಗಳು ನಡೆಯಲಿವೆ.