Monday, July 15, 2024
Homeಸುದ್ದಿಕರಾವಳಿಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕುಂದಾಪುರ : ಬಸವ ವಸತಿ ಯೋಜನೆಯ ಕೆಲಸಕ್ಕೆ ಕಂತು ಬಿಡುಗಡೆ ಮಾಡಲು ಹಣದ ಬೇಡಿಕೆ ಇರಿಸಿದ ಆರೋಪದಡಿ ತಾಲೂಕಿನ ಕಾವ್ರಾಡಿ ಪಂಚಾಯತಿಯ ಕಾರ್ಯದರ್ಶಿ ಗೋಪಾಲ ದೇವಾಡಿಗ ಎಂಬುವವರನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಸವ ವಸತಿ ಯೋಜನೆಯ ಕಂತು ಬಿಡುಗಡೆಗೊಳಿಸಲು ಜಾವೇದ್ ಕಾರ್ವಾಡಿ ಎಂಬುವವರಿಂದ, ಪಂಚಾಯತ್ ಕಾರ್ಯದರ್ಶಿ ಗೋಪಾಲ ದೇವಾಡಿಗ 15,000 ರೂ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಫಲಾನುಭವಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಅದರಂತೆ ಆರೋಪಿಯನ್ನು ಟ್ರಾಪ್ ಮಾಡಿ ಹಣ ಪಡೆಯುವ ವೇಳೆ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್.ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ಮಲ್ಲಿಕಾ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್, ಸತೀಶ್ ಆಚಾರ್ಯ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News