ಲೈಂಗಿಕ ಕಿರುಕುಳ : ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಉಪ್ಪುಂದ : ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಿಜೂರು ಪ್ರೌಢಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮಧ್ದೋಡಿ ಆರೋಪಿಯಾಗಿದ್ದಾನೆ.

ಸೆ. 26ರಂದು ಶಿಕ್ಷಕ ಸುಬ್ರಹ್ಮಣ್ಯ ಮಧ್ದೋಡಿ ಬಾಲಕಿಯನ್ನು ತನ್ನ ಕೊಠಡಿಗೆ ಕರೆಯಿಸಿಕೊಂಡು ಅವಾಚ್ಯ ಪದಗಳನ್ನು ಬಳಸಿ ಅವಮಾನಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ಬಾಲಕಿ ತಿಳಿಸಿದ್ದಾಳೆ. ಬಳಿಕ ಊರವರು ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದು, ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೈಂದೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top