ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಕೇಶವ (43) ಬಂಧಿತ ಆರೋಪಿ.
ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಾಲಕಿ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಅರೆಸ್ಟ್
