ಕಣ್ಣೂರು : ಕರ್ನಾಟಕ ಗಡಿ ಸಮೀಪ ಕೇರಳ ನಕ್ಸಲ್ ನಿಗ್ರಹ ಪಡೆ ಥಂಡರ್ ಬೋಲ್ಟ್ ಮತ್ತು ನಕ್ಸಲ್ ತಂಡಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಸೋಮವಾರದಂದು ಕರಿಕ್ಕೊಟ್ಟಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಗಡಿಗ್ರಾಮ ಕುಟ್ಟಕ್ಕೆ ಕೆಲವೇ ಕಿ.ಮೀ ದೂರದಲ್ಲಿರುವ ಕೇರಳದ ಐಯಮ್ಮುನ್ ಎಂಬ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.
9 ಮಂದಿಯ ನಕ್ಸಲ್ ತಂಡದ ಶಿಬಿರದ ಮಾಹಿತಿ ದೊರೆತು, ಕೂಂಬಿಂಗ್ ನಡೆಸುತ್ತಿದ್ದ ನಕ್ಸಲ್ ನಿಗ್ರಹ ಪಡೆಯು ಗುಂಡಿನ ದಾಳಿ ನಡೆಸಿತು. ಪ್ರತಿಯಾಗಿ ನಕ್ಸಲರ ತಂಡವೂ ತೀವ್ರವಾದ ಗುಂಡಿನ ಚಕಮಕಿ ನಡೆಸಿದೆ. ಈ ವೇಳೆ ಎಲ್ಲರೂ ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಎರಡು ರೈಫಲ್ಸ್ ಸಿಕ್ಕಿದ್ದು, ರಕ್ತದ ಕಲೆ ಪತ್ತೆಯಾಗಿವೆ. ಹೀಗಾಗಿ ಗುಂಡಿನ ಚಕಮಕಿಯಲ್ಲಿ ನಕ್ಸಲರು ಗಾಯಗೊಂಡಿರಬಹುದು ಎಂದು ಶಂಕಿಸಲಾಗಿದೆ.